ಬೆಳಗಾವಿ: ವಿಧಾನಪರಿಷತ್ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಪೈಪೋಟಿ ಜೋರಾಗಿದೆ. ಡಿಸೆಂಬರ್ 10ರಂದು ನಡೆಯಲಿರುವ ಪರಿಷತ್ ಚುನಾವಣೆಗಾಗಿ ಬೆಳಗಾವಿಯಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಈಗಾಗಲೇ 7 ಜನರು ಅರ್ಜಿ ಸಲ್ಲಿಸಿದ್ದಾರೆ.
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಸಹೋದರ ಚನ್ನರಾಜಗೆ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ಕಸರತ್ತು ನಡೆಸಿದ್ದಾರೆ. ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ಭೇಟಿಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್, ಚೆನ್ನರಾಜ್ ಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ. ಇತ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿಯಾಗಿರುವ ಚನ್ನರಾಜ್ ಕೂಡ ಟಿಕೆಟ್ ಗಾಗಿ ಮನವಿ ಮಾಡಿದ್ದಾರೆ.
ರಾತ್ರಿ ಈ ಸಮಯದಲ್ಲಿ ಮಲಗಿದ್ರೆ ಹೃದಯಾಘಾತದ ಅಪಾಯ ಕಡಿಮೆ
ಇನ್ನೊಂದೆಡೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಪ್ತ ವೀರಕುಮಾರ್ ಪಾಟೀಲ್ ಕೂಡ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ, ಶಹಜಹಾನ್ ಡೊಂಗರಗಾವ್, ಡಾ. ಎನ್.ಎ.ಮಗದುಮ್, ಸುನೀಲ್ ಹನಮಣ್ಣವರ್, ಕಿರಣ್ ಸಾಧು ಸೇರಿ ಒಟ್ಟು 7 ಜನರು ಕಾಂಗ್ರೆಸ್ ಟಿಕೆಟ್ ಗಾಗಿ ಪೈಪೋಟಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಮತ್ತೊಂದೆಡೆ ವಿಧಾನಪರಿಷತ್ 25 ಸ್ಥಾನಗಳಿಗೆ ನಡೆಯುವ ಚುನಾವಣೆ ಎದುರಿಸಲು ಬಿಜೆಪಿ ಕೂಡ ಸಿದ್ಧತೆ ನಡೆಸಿದ್ದು, ನವೆಂಬರ್ 18ರಿಂದ ಜಿಲ್ಲಾವಾರು ಸರಣಿ ಪ್ರವಾಸ ಕೈಗೊಳ್ಳಲು ಮುಂದಾಗಿದೆ.