ಬೆಂಗಳೂರು: ವಿಧಾನಪರಿಷತ್ 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಿಗದಿಯಾಗಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿದೆ.
ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಆರಂಭವಾಗಿದ್ದು, ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವಂತೆ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.
BIG NEWS: ದೇವೇಗೌಡರ ಕುಟುಂಬದ ಇನ್ನೊಂದು ಕುಡಿ ರಾಜಕೀಯಕ್ಕೆ ಎಂಟ್ರಿ…?
ಎರಡು ದಿನಗಳ ದೆಹಲಿ ಪ್ರವಾಸಕ್ಕೆ ತೆರಳಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಈ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿದ್ದು, ಈ ವೇಳೆ ಪರಿಷತ್ ಅಭ್ಯರ್ಥಿಗಳನ್ನು ಶೀಘ್ರ ಘೋಷಣೆ ಮಾಡಿದರೆ ಚುನಾವಣೆಗೆ ತಯಾರಿ ಮಾಡಿಕೊಳ್ಳಲು ಸಾಧ್ಯವಾಗುತ್ತೆ. ಹೀಗಾಗಿ ಅಭ್ಯರ್ಥಿ ಘೋಷಣೆ ವಿಳಂಬ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.
ಇನ್ನೆರಡು ದಿನಗಳಲ್ಲಿ ಬಿಜೆಪಿ ವರಿಷ್ಠರ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆ ಇದೆ.