ಬೆಂಗಳೂರು: ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಇಂದಿನಿಂದ ಸೆ.23ರವರೆಗೆ ಕಲಾಪಗಳು ನಡೆಯಲಿವೆ. 40% ಕಮಿಷನ್ ವಿಚಾರ, ಪಿ ಎಸ್ ಐ ಹಗರಣ, ಭ್ರಷ್ಟಾಚಾರ, ಬೆಂಗಳೂರಿನಲ್ಲಿ ಪ್ರವಾಹ, ಅತಿವೃಷ್ಟಿಯಿಂದ ರಾಜ್ಯದಲ್ಲಿ ಹಾನಿ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷ ಕಾಂಗ್ರೆಸ್ ಸಜ್ಜಾಗಿದ್ದರೆ, ಎಲ್ಲದಕ್ಕೂ ಉತ್ತರ ನೀಡುವ ನಿಟ್ಟಿನಲ್ಲಿ ಆಡಳಿತ ಪಕ್ಷ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ.
ಈಗಾಗಲೇ ವಿಧಾನಸಭೆ ಹಾಗೂ ಪರಿಷತ್ ಕಲಾಪ ಆರಂಭವಾಗಿದ್ದು, ವಿಧಾನಸಭೆಯಲ್ಲಿ ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.
ಉಮೇಶ್ ಕತ್ತಿ, ಮಾಜಿ ಸಚಿವರಾಗಿದ್ದ ಎಂ.ರಘುಪತಿ, ಪ್ರಭಾಕರ್ ರಾಣೆ, ಮಾಜಿ ಶಾಸಕ ಯಾದವ್ ರಾವ್, ಕೆ.ಕೆಂಪೇಗೌಡ, ಜಿ.ವಿ.ಶ್ರೀರಾಮರೆಡ್ಡಿ, ಹಿನ್ನೆಲೆ ಗಾಯಕ ಶಿವಮೊಗ್ಗ ಸುಬ್ಬಣ್ಣ ಸೇರಿದಂತೆ ಅಗಲಿದ ನಾಡಿನ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.