ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯುತ್ತಿದ್ದು, ಏಪ್ರಿಲ್ 13 ರಂದು ಅಧಿಸೂಚನೆ ಹೊರಬೀಳಲಿದೆ. ಅಂದಿನಿಂದಲೇ ನಾಮಪತ್ರಗಳನ್ನು ಸ್ವೀಕರಿಸಲಾಗುತ್ತಿದ್ದು, ಏಪ್ರಿಲ್ 20 ರ ವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.
ಮತದಾರರ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಏಪ್ರಿಲ್ 11 ಅಂತಿಮ ದಿನಾಂಕವಾಗಿದ್ದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮಾರ್ಚ್ 29 ರಿಂದ ನೀತಿ ಸಮಿತಿ ಜಾರಿಗೆ ಬಂದಿದ್ದು, ಮತ ಎಣಿಕೆಯ ದಿನವಾದ ಏಪ್ರಿಲ್ 13ರ ವರೆಗೆ ಜಾರಿಯಲ್ಲಿರುತ್ತದೆ.
ಇದೇ ಮೊದಲ ಬಾರಿಗೆ ಕೇಂದ್ರ ಚುನಾವಣಾ ಆಯೋಗ 80 ವರ್ಷ ವಯೋಮಾನ ಮೀರಿದವರು ವಿಕಲಚೇತನರು ಮತ್ತು ಕೋವಿಡ್ 19 ಭಾದಿತ ಮತದಾರರಿಗೆ ಅಂಚೆ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಿದ್ದು ಮತದಾನ ಮಾಡುವ ಪ್ರಕ್ರಿಯೆಯನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ವೀಕ್ಷಿಸಲು ಅವಕಾಶವಿದೆ.