alex Certify BIG NEWS: ವಿಧಾನಸಭಾ ಚುನಾವಣೆ; ಕೇಂದ್ರ ಚುನಾವಣಾ ಆಯೋಗದಿಂದ ಸಿದ್ಧತೆ; 58,282 ಮತಗಟ್ಟೆ ಸ್ಥಾಪನೆ; ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನಸಭಾ ಚುನಾವಣೆ; ಕೇಂದ್ರ ಚುನಾವಣಾ ಆಯೋಗದಿಂದ ಸಿದ್ಧತೆ; 58,282 ಮತಗಟ್ಟೆ ಸ್ಥಾಪನೆ; ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ

ಬೆಂಗಳೂರು; ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದು, ಮುಖ್ಯ ಚುನವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.

ವಿಕಾಸಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜೀವ್ ಕುಮಾರ್, ಮೇ 24ಕ್ಕೆ 15ನೇ ವಿಧಾನಸಭೆಯ ಅವಧಿ ಮುಗಿಯಲಿದೆ. ಕರ್ನಾಟಕ ಸಾರ್ವತ್ರಿಕ ಚುನಾವಣೆಯ ಕುರಿತು ಸಭೆ ನಡೆಸಲಾಗಿದ್ದು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಚುನಾವಣಾಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳ ಜೊತೆ ಚುನಾವಣಾ ಪೂರ್ವ ಸಿದ್ಧತೆ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.

ಕರ್ನಾಟಕದಲ್ಲಿ ಒಟ್ಟು ಮತದಾರರ ಸಂಖ್ಯೆ 5,21,73,59. ಮೊದಲಬಾರಿಗೆ 9,17,241 ಮಂದಿ ಮತದಾನ ಮಾಡುತ್ತಾರೆ. ಕರ್ನಾಟಕದಲ್ಲಿ ಪುರುಷ ಮತದಾರರ ಸಂಖ್ಯೆ 2,62,42,561. ರಾಜ್ಯದಲ್ಲಿ ಮಹಿಳಾ ಮತದಾರರ ಸಂಖ್ಯೆ 2,59,26,319. 17 ವರ್ಷ ಮೇಲ್ಪಟ್ಟ 125,406 ಜನರಿಂದ ಮತದಾನಕ್ಕೆ ಅರ್ಜಿ ಸಲಿಸಲಾಗಿದೆ. ರಾಜ್ಯದಲ್ಲಿ ಸರ್ಕಾರಿ ನೌಕರರ ಮತದಾರರ ಸಂಖ್ಯೆ 47,779. 58,282 ಮತಗಟ್ಟೆ ಕೇಂದ್ರ ಸ್ಥಾಪಿಸಲಾಗುತ್ತಿದೆ. 883 ಮತದಾರರಿರುವ ಕಡೆ ಒಂದು ಮತಗಟ್ಟೆ ಸ್ಥಾಪನೆಯಾಗಲಿದೆ. ನಗರ ಪ್ರದೇಶಗಳಲ್ಲಿ 24,063 ಮತಗಟ್ಟೆಗಳ ಸ್ಥಾಪನೆ. ಗ್ರಾಮೀಣ ಪ್ರದೇಶಗಳಲ್ಲಿ 34,219 ಮತಗಟ್ಟೆಗಳ ಸ್ಥಾಪನೆ. 80 ವರ್ಷ ಆದವರಿಗೆ ಮನೆಯಲ್ಲೇ ಮತದಾನ ಮಾಡಲು ಅವಕಾಶ ನೀದಲಾಗುವುದು ಎಂದು ವಿವರಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...