ಬೆಂಗಳೂರು: ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ.
ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಅಶ್ವತ್ಥನಾರಾಯಣ ಮಲ್ಲೇಶ್ವರಂ BWSSB ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಕಲಘಟಗಿ ಕಾಂಗ್ರೆಸ್ ಅಭ್ಯರ್ಥಿ ಸಂತೋಷ್ ಲಾಡ್ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ಕಲಬುರ್ಗಿಯ ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಚಿತ್ತಾಪುರ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಬೆಂಗಳೂರಿನ ಗಾಂಧಿನಗರ ವಿಧನಸಭಾ ಕ್ಷೇತ್ರದ ಕೈ ಅಭ್ಯರ್ಥಿ ದಿನೇಶ್ ಗುಂಡೂರಾವ್, ಸಾವಿರಾರು ಕಾರ್ಯಕರ್ತರೊಂದಿಗೆ ಆಗಮಿಸಿ ಗೂಡ್ ಶೆಡ್ ರಸ್ತೆಯ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಇದೇ ವೇಳೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ತಹಶೀಲ್ದಾರ್ ಕಚೇರಿಗೆ ತೆರಳಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಏ.19ರಂದು ವಿಜಯೇಂದ್ರ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.
ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಚಿವ ಸೋಮಣ್ಣ ನಾಮಪತ್ರ ಸಲ್ಲಿಸಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಸೋಮಣ್ಣ ಅವರಿಗೆ ಸಾಥ್ ನೀಡಿದ್ದಾರೆ.
ಮತ್ತೊಂದೆಡೆ ರಾಮನಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದರೆ, ಹೊಳೆನರಸಿಪುರ ಕ್ಷೇತ್ರದಿಂದ ಹೆಚ್.ಡಿ.ರೇವಣ್ಣ, ಹಾಸನದಿಂದ ಸ್ವರೂಪ್ ನಾಮಪತ್ರ ಸಲ್ಲಿಸಿದ್ದಾರೆ.