ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟ-ನಟಿಯರು ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ.
ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ತಮ್ಮ ಕುಟುಂಬ ಸಮೇತರಾಗಿ ಬಂದು ಸದಾಶಿವನಗರ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಇದೇ ವೇಳೆ ನಟ ಯುವ ರಾಜ್ ಕುಮಾರ್ ಕೂಡ ಮತ ಚಲಾಯಿಸಿದರು.
ಈ ವೇಳೆ ಮಾತನಾಡಿದ ನಟ ರಾಘವೇಂದ್ರ ರಾಜ್ ಕುಮಾರ್, ನಾನು ನನ್ನ ಕೆಲಸ ಮಾಡಿದ್ದೇನೆ. ನೀವು ನಿಮ್ಮ ಕೆಲಸ ಮಾಡಿ. ಎಲ್ಲರೂ ಮತದಾನ ಮಾಡಿ ಎಂದು ಹೇಳಿದರು.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಬೆಂಗಳೂರಿನಲ್ಲಿ ಮತದಾನ ಮಾಡಿದ್ದಾರೆ.
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಪತ್ನಿ ಶಿಲ್ಪಾ ಗಣೇಶ್ ಬೆಂಗಳೂರಿನ ಆರ್.ಆರ್.ನಗರದ ಮೌಂಟ್ ಕಾರ್ಮೆಲ್ ಕಾಲೇಜು ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.
ರಿಯಲ್ ಸ್ಟಾರ್ ಉಪೇಂದ್ರ ಬೆಂಗಳೂರಿನ ಕತ್ರಿಗುಪ್ಪೆ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಉಡುಪಿ ವಿಧಾನಸಭಾ ಕ್ಷೇತ್ರದ ಕುಕ್ಕಿಕಟ್ಟೆ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಈ ವೇಳೆ ರಕ್ಷಿತ್ ಶೆಟ್ಟಿ ತಂದೆ-ತಾಯಿ ಹಾಗೂ ಸಹೋದರ ಕೂಡ ಮತ ಚಲಾಯಿಸಿದರು.
ಕಾಂತಾರ ಸಿನಿಮಾ ಖ್ಯಾತಿಯ ನಟಿ ಸಪ್ತಮಿ ಗೌಡ ಬೆಂಗಳೂರಿನ ಜೆ.ಪಿ ನಗರದಲ್ಲಿ ತಂದೆಯ ಜೊತೆ ಆಗಮಿಸಿ ಮತದಾನ ಮಾಡಿದರು.
ನಟಿ ಅಮೂಲ್ಯ ಹಾಗೂ ಪತಿ ಜಗದೀಶ್ ಬೆಂಗಳೂರಿನ ಆರ್.ಆರ್.ನಗರ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ನಟ ರಮೇಶ್ ಅರವಿಂದ್ ಹಾಗೂ ಪತ್ನಿ ಅರ್ಚನಾ ಬೆಂಗಳೂರಿನ ಜೆ.ಪಿ.ನಗರ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು
ಹಿರಿಯ ನಟ ಜಗ್ಗೇಶ್ ಬೆಂಗಳೂರಿನ ಮಲ್ಲೇಶ್ವರಂ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಎಲ್ಲರೂ ತಪ್ಪದೇ ಮತದಾನ ಮಾಡುವಂತೆ ಕರೆ ನೀಡಿದರು.