alex Certify BIG NEWS: ವಿಧಾನಸಭಾ ಚುನಾವಣೆ; 6 ತಿಂಗಳ ಮೊದಲೇ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ; ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನಸಭಾ ಚುನಾವಣೆ; 6 ತಿಂಗಳ ಮೊದಲೇ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ; ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಮನವಿ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲೇಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಚುನಾವಣೆಗೆ 6 ತಿಂಗಳ ಮೊದಲು ಅಭ್ಯರ್ಥಿಗಳನ್ನು ಘೋಷಿಸಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ರಾಹುಲ್ ಗಾಂಧಿಯವರಿಗೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್ ಅಧಿಕಾರಕ್ಕೆ ತರಬೇಕಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸುವ ನಿಟ್ಟಿನಲ್ಲಿ ಈಗಿನಿಂದಲೇ ಎಲ್ಲಾ ತಯಾರಿ ಆರಂಭವಾಗಬೇಕು. 6 ತಿಂಗಳ ಮೊದಲು ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕು ಎಂದರು.

ರಾಜ್ಯಾದ್ಯಂತ ಮನೆ ಮನೆಗೂ ತೆರಳಿ ಬಿಜೆಪಿ ದುರಾಡಳಿತ, ಸರ್ಕಾರದ ವೈಫಲ್ಯದ ಬಗ್ಗೆ ಜನರಿಗೆ ಮನವರಿಕೆ ಮಾಡಬೇಕು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಬೇಕು ಎಂದು ಕರೆ ನೀಡಿದರು.

ನಿಮ್ಮ ಮೊಬೈಲ್‌ ಹಳೆಯದಾಗಿದ್ಯಾ…..? ಕೇವಲ 100 ರೂಪಾಯಿ‌ ಖರ್ಚಿನಲ್ಲಿ ಮಾಡ್ಬಹುದು ಬ್ರಾಂಡ್ ನ್ಯೂ

ಇದೇ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬೈ ಎಲೆಕ್ಷನ್ ನಲ್ಲಿ ಉತ್ತಮ ಕೆಲಸ ಮಾಡಿದ್ದೇವೆ. ಷೇರಿಂಗ್ ಆಂಡ್ ಕೇರಿಂಗ್ ಇಲ್ಲದೇ ಏನನ್ನೂ ಮಾಡಲು ಸಾಧ್ಯವಿಲ್ಲ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಚುನಾವಣೆಯಲ್ಲಿ ಗೆಲುವು ಸಾಧಿಸುವ ಜವಾಬ್ದಾರಿ ನಮ್ಮ ಮೇಲಿದೆ. ನಿರುದ್ಯೋಗಿಗಳಿಗಾಗಿ, ಮಹಿಳೆಯರಿಗಾಗಿ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಆ ನಿಟ್ಟಿನಲ್ಲಿ ಕೆಲಸಗಳನ್ನು ಮಾಡಬೇಕಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...