
ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ವಿಧಾನಸಭೆ ಹಾಗೂ ವಿಧಾನ ಪರಿಷತ್ ಗೆ ಮುಖ್ಯ ಸಚೇತಕರನ್ನು ಆಯ್ಕೆ ಮಾಡಲಾಗಿದೆ.
ವಿಧಾನಸಭೆ ಮುಖ್ಯ ಸಚೇತಕರಾಗಿ ಅಶೋಕ್ ಪಟ್ಟಣ್ ಹಾಗೂ ವಿಧಾನ ಪರಿಷತ್ ಸಚೇತಕರಾಗಿ ಸಲೀಂ ಅಹ್ಮದ್ ನೇಮಕಗೊಂಡಿದ್ದಾರೆ.
ಇಂದಿನಿಂದ ಕಾಂಗ್ರೆಸ್ ಸರ್ಕಾರದ ಮೊದಲ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಜುಲೈ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.