ಬೆಂಗಳೂರು: ವಿಧಾನಸೌಧದಲ್ಲಿ 10.5 ಲಕ್ಷ ರೂಪಾಯಿ ಅನಧಿಕೃತ ಹಣ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ನಾನು ಏನೂ ಮಾತನಾಡುವುದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಆ ಹಣ ಯಾರದ್ದು ಅನ್ನೋ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ನಡುವೆ ನಾನು ಮಾತನಾಡೋಕೆ ಹೋಗಲ್ಲ. ತನಿಖೆ ಪ್ರಾಮಾಣಿಕವಾಗಿ, ಪಾರದರ್ಶಕವಾಗಿ ನಡೆಯುತ್ತದೆ ಎಂದರು.
ತನಿಖೆಯಿಂದ ಏನು ಗೊತ್ತಾಗುತ್ತದೆ ಅದರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ ಎಂದು ಹೇಳಿದರು.