ಬೆಂಗಳೂರು: ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆ.24ರವರೆಗೆ ನಡೆಯಲಿದೆ. ಫೆ.17ರಂದು ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.
ವಿಧಾನಸಭಾ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಬಜೆಟ್ ಹಲವು ಘೋಷಣೆಗಳನ್ನು ಮಾಡುವ ನಿರೀಕ್ಷೆಯಿದೆ.
ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ವಿಧಾನಸೌಧದ ಸುತ್ತ 2 ಕೀ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಲಿಸಲಾಗಿದೆ.
ಈ ಪ್ರದೇಶಗಳಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ, ಮೆರವಣಿಗೆ, ಪ್ರತಿಭಟನೆ, ಸಭೆಗಳನ್ನು ಆಯೋಜಿಸುವಂತಿಲ್ಲ, ಯಾವುದೇ ಪ್ರತಿಕೃತಿ ದಹನ, ಪ್ರತಿಕೃತಿ ಪ್ರದರ್ಶನ ನಿಷೇಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶಿಸಿದ್ದಾರೆ.