ಬೆಂಗಳೂರು: ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ವಿಧಾನಸೌಧದ ಸುತ್ತಮುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದು, ಇಂದಿನಿಂದ ಸೆ.23ರವರೆಗೆ ಅಧಿವೇಶನ ಮುಗಿಯುವವರೆಗೂ ಪ್ರತಿದಿನ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ತಿಳಿಸಿದ್ದಾರೆ.
ತನ್ನ ಪ್ಯಾಡಲ್‌ಬೋರ್ಡ್ ಕಡಿಯಲು ಬಂದ ಮೊಸಳೆಯನ್ನು ನಾಜೂಕಾಗಿ ದೂರ ಸಾಗಿಸಿದ ಮಹಿಳೆ
ಅಧಿವೇಶನ ಹಿನ್ನೆಲೆಯಲ್ಲಿ ವಿವಿಧ ಸಂಘಟನೆ, ರಾಜಕೀಯ ಪಕ್ಷಗಳಿಂದ ವಿಧಾನಸೌಧಕ್ಕೆ ಮುತ್ತಿಗೆ, ಪ್ರತಿಭಟನೆ, ಮೆರವಣಿಗೆ, ಧರಣಿ ನಡೆಯುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ.ವಿಧಾನಸೌಧದ ಸುತ್ತ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.