ಬೆಂಗಳೂರು: ರಾಜ್ಯ ವಿಧಾನ ಪರಿಷತ್ ಸ್ಥಾನಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಹೆಸರನ್ನು ಶಿಫಾರಸು ಮಾಡಲು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಬಿಜೆಪಿ ಕಚೇರಿಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ವಿಜಯೇಂದ್ರ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ.
ಪರಿಷತ್ ಗೆ ನಾವು ಹೆಸರು ಹೇಳುತ್ತೆವೆ. ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ. ಬಿ.ವೈ. ವಿಜಯೇಂದ್ರ ಹೆಸರನ್ನು ಶಿಫಾರಸು ಮಾಡುವುದಾಗಿ ಇದೇ ವೇಳೆ ಸಿಎಂ ಬೊಮ್ಮಾಯಿ ತಿಳಿಸಿದರು.