alex Certify BIG NEWS: ವಿಧಾನ ಪರಿಷತ್ ಸಭಾಪತಿ ಚುನಾವಣೆ; ನಾಳೆ ಹೊರಟ್ಟಿ ನಾಮಪತ್ರ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನ ಪರಿಷತ್ ಸಭಾಪತಿ ಚುನಾವಣೆ; ನಾಳೆ ಹೊರಟ್ಟಿ ನಾಮಪತ್ರ ಸಲ್ಲಿಕೆ

ಬೆಳಗಾವಿ: ವಿಧಾನಪರಿಷತ್ ಸಭಾಪತಿ ಚುನಾವಣೆ ಡಿಸೆಂಬರ್ 21ರಂದು ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.

ಬೆಳಗಾವಿಯ ವಿಧಾನಪರಿಷತ್ ಸಭಾಂಗದಲ್ಲಿ ಬಿಜೆಪಿ ನಾಯಕರ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು. ನಾಳೆ ಮಧ್ಯಾಹ್ನ ಬಸವರಾಜ್ ಹೊರಟ್ಟಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ನಾಳೆ ಮಧ್ಯಾಹ್ನ 2ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ.

ಜೆಡಿಎಸ್ ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಮತ್ತೆ ಸಭಾಪತಿಯಾಗಿ ಆಯ್ಕೆಯಾಗುವ ಸಾಧ್ಯತೆ ದಟ್ಟವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...