ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಪಾದಯಾತ್ರೆಯಲ್ಲಿ ತೊಡಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಇದೀಗ ಜ್ವರದಿಂದ ಬಳಲುತ್ತಿದ್ದು, ಪಾದಯಾತ್ರೆ ಅರ್ಧಕ್ಕೆ ಬಿಟ್ಟು ಬೆಂಗಳೂರಿಗೆ ವಾಪಸ್ ಆದ ಘಟನೆ ನಡೆದಿದೆ.
ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ಆರಂಭಿಸಿದ್ದು, ಇಂದು ಸಂಗಮ ಕ್ಷೇತ್ರದಿಂದ ಪಾದಯಾತ್ರೆಗೆ ಚಾಲನೆ ದೊರೆತಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿ ಕೆಲ ದೂರ ಸಾಗುತ್ತಿದ್ದಂತೆಯೇ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಜ್ವರ ಹೆಚ್ಚಿದ್ದು, ಪಾದಯಾತ್ರೆ ಬಿಟ್ಟು ಕಾರಿನಲ್ಲಿ ಹೆಗ್ಗನೂರು ಗ್ರಾಮಕ್ಕೆ ತೆರಳಿ ವಿಶ್ರಾಂತಿ ಪಡೆದಿದ್ದಾರೆ.
ಈ ನಡುವೆ ಸಿದ್ದರಾಮಯ್ಯನವರಿಗೆ ಜ್ವರ ತೀವ್ರವಾಗಿರುವುದರಿಂದ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಗಾಗಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಸಿದ್ದರಾಮಯ್ಯ ಕೋವಿಡ್ ಬೂಸ್ಟರ್ ಡೋಸ್ ಹಾಕಿಸಿಕೊಂಡಿದ್ದರು. ಬೂಸ್ಟರ್ ಡೋಸ್ ಪಡೆದ ಹಿನ್ನೆಲೆಯಲ್ಲಿ ನಿನ್ನೆಯಿಂದಲೇ ಮಾಜಿ ಸಿಎಂ ಜ್ವರದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.