ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಿಧಾನ ಪರಿಷತ್ ಬಿಜೆಪಿ ಸದಸ್ಯ ಚಲವಾದಿ ನಾರಾಯಣಸ್ವಾಮಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಚಲವಾದಿ ನಾರಾಯಣಸ್ವಾಮಿ, ಸಿದ್ದರಾಮಯ್ಯ ಬಗ್ಗೆ ಗೌರವ ಇದೆ. ಆದರೆ ನನ್ನನ್ನು ನಿಂದಿಸುವ ಭರದಲ್ಲಿ ಅವರು ಜಾತಿಯನ್ನು ನಿಂದಿಸಿದ್ದಾರೆ. ಸರ್ಕಾರದ ಅಭಿವೃದ್ಧಿ ವಿಚಾರವಾಗಿ ಬೇಕಿದ್ದರೆ ವಾಗ್ದಾಳಿ ನಡೆಸಲಿ, ಆದರೆ ಜಾತಿ ವಿಷಯವಾಗಿ ನಿಂದಿಸಿದ್ದು ಅಪಮಾನ. ಹೀಗಾಗಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿದ್ದೇನೆ ಎಂದರು.
ಸಿದ್ದರಾಮಯ್ಯ ಅವರನ್ನು ತಕ್ಷಣ ಬಂಧಿಸಬೇಕು. ಅವರನ್ನು ಬಂಧಿಸಲು ವಿಳಂಬ ಮಾಡಿದರೆ ಪ್ರತಿಭಟನೆ ನಡೆಸುತ್ತೇನೆ ಎಂದು ಕಿಡಿಕಾರಿದ್ದಾರೆ.