ಬೆಂಗಳೂರು: ವಿರೋಧಿಗಳಿಗೆ ಸ್ವಾತಂತ್ರ್ಯ ದಿನಾಚರಣೆ ವೇದಿಕೆಯಿಂದಲೇ ಖಡಕ್ ಸಂದೇಶ ರವಾನಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ನನ್ನ ಬಗ್ಗೆ ಅನುಮಾನ, ಟೀಕೆಗಳು ವ್ಯಕ್ತವಾಗುತ್ತಿದೆ. ನನ್ನ ಬಗೆಗಿನ ಟೀಕೆಗಳು ನನಗೆ ಆಶಿರ್ವಾದ, ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುತ್ತೇನೆ ಎಂದು ಹೇಳಿದ್ದಾರೆ.
75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಹೊಸ ಚಿಂತನೆ, ಹೊಸ ಹಾದಿ, ಹೊಸ ದಿಕ್ಸೂಚಿಯೊಂದಿಗೆ ನವ ಕರ್ನಾಟಕ ನಿರ್ಮಾಣದ ಸಂಕಲ್ಪ ಮಾಡಿದರು.
ದೇಸೀ ಧಿರಿಸಿನಲ್ಲಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಪವರ್ಸ್ಟಾರ್
ನನಗೆ ಕೇವಲ 20 ತಿಂಗಳು ಮಾತ್ರ ಅಧಿಕಾರಾವಧಿ ಅವಕಾಶವಿದೆ ಎಂಬ ಅರಿವಿದೆ. ಅಲ್ಪಾವಧಿ, ದೀರ್ಘಾವಧಿ ಯೋಜನೆಗಳನ್ನು ಪ್ರತ್ಯೇಕವಾಗಿ ರೂಪಿಸಿ, ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ. ಯೋಜನೆಗಳನ್ನು ನೂರರಷ್ಟು ಹೇಗೆ ಜಾರಿಗೆ ತರಬೇಕು ಎಂಬುದು ಗೊತ್ತಿದೆ. ನನ್ನ ಮುಂದೆ ನೂರಾರು ಸವಾಲುಗಳಿವೆ. ಟೀಕೆ ನನ್ನ ಪಾಲಿನ ಆಶೀರ್ವಾದ. ಸವಾಲುಗಳನ್ನೇ ಮೆಟ್ಟಿಲನ್ನಾಗಿಸಿಕೊಂಡು ನಿಲ್ಲುತ್ತೇನೆ ಎಂದು ಹೇಳುವ ಮೂಲಕ ವಿರೋಧಿಗಳಿಗೆ ಸಿಎಂ ಖಡಕ್ ಸಂದೇಶ ರವಾನಿಸಿದರು.