ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆ ಬಳಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಅದಾದ ಬಳಿಕ ಸುರತ್ಕಲ್ ಹೊರ ವಲಯದಲ್ಲಿ ಮಹಮ್ಮದ್ ಫಾಸಿಲ್ ಎಂಬ ಯುವಕನನ್ನು ಹತ್ಯೆಗೈಯ್ಯಲಾಗಿತ್ತು.
ಈ ಕುರಿತಂತೆ ಪ್ರತಿಕ್ರಿಯೆ ನೀಡುವ ವೇಳೆ ಕಾಳಿ ಮಠದ ರಿಷಿ ಕುಮಾರ ಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅಲ್ಲದೇ ಬಡ ಜನರನ್ನು ಕೊಲ್ಲುವ ಮತಾಂಧರು ತಾಕತ್ತಿದ್ದರೆ ನನ್ನನ್ನು ಮುಟ್ಟಲಿ ಎಂದು ಸವಾಲು ಹಾಕಿದ್ದರು.
ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತಲ್ಲದೇ ರಿಷಿಕುಮಾರ ಸ್ವಾಮಿ ವಿರುದ್ದ ಕೇಸ್ ದಾಖಲಿಸಬೇಕೆಂಬ ಒತ್ತಾಯ ಕೇಳಿ ಬಂದಿತ್ತು. ಇದೀಗ ತುಮಕೂರಿನ ತಿಲಕ್ ನಗರ ಠಾಣೆ ಪೊಲೀಸರು ರಿಷಿಕುಮಾರ ಸ್ವಾಮೀಜಿ ವಿರುದ್ದ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.