![](https://kannadadunia.com/wp-content/uploads/2023/05/e161f0ac-b74a-4127-9bc7-a667f4c2821d.jpg)
ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿರುವ ನಿಯೋಜಿತ ಸಿಎಂ ಸಿದ್ದರಾಮಯ್ಯ ಹಾಗೂ ನಿಯೋಜಿತ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸ್ವಾಗತಕ್ಕೆ ಭರ್ಜರಿ ಸಿದ್ಧತೆ ನಡೆದಿದೆ.
ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಒಟ್ಟಿಗೆ ದೆಹಲಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಕೆಲವೆ ಹೊತ್ತಲ್ಲಿ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಇಬ್ಬರು ನಾಯಕರ ಸ್ವಾಗತಕ್ಕೆ ಭಾರಿ ಸಿದ್ಧತೆ ನಡೆಸಲಾಗಿದೆ.
ಹೆಚ್ ಎ ಎಲ್ ವಿಮಾನ ನಿಕ್ದಾಣದ ಬಳಿ ಅಭಿಮಾನಿಗಳು, ಬೆಂಬಲಿಗರ ದಂಡೇ ಆಗಮಿಸಿದ್ದು, ಸ್ವಾಗತಕ್ಕಾಗಿ ಕಾದು ಕುಳಿತಿದ್ದರಎ. ಇನ್ನೊಂದೆಡೆ ವಿವಿಧ ಕಲಾತಂಡಗಳಿಂದ ಸಂಭ್ರಮಾಚರಣೆ ನಡೆಸಲಾಗುತ್ತಿದೆ.