ಮೈಸೂರು: ಮೈಸೂರಿನಲ್ಲಿ ನಾಡಹಬ್ಬ ಮೈಸೂರು ದಸರಾ ಕಳೆಗಟ್ಟಿದ್ದು, ವಿಶ್ವವಿಖ್ಯಾತ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಅರಮನೆಯಲ್ಲಿ ವಿಜಯದಶಮಿ ಸಂಭ್ರಮ ಮನೆ ಮಾಡಿದೆ.
ಇಂದು ಸಂಜೆ ಅರಮನೆ ಆವರಣದಲ್ಲಿ ಜಂಬೂಸವಾರಿ ಮೆರವಣಿಗೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಈಗಾಗಲೇ ಚಾಮುಂಡಿ ಬೆಟ್ಟದಿಂದ ಚಾಮುಂಡೇಶ್ವರಿ ಉತ್ಸವ ಮೂರ್ತಿ ಮೆರವಣಿಗೆ ಆರಂಭವಾಗಿದ್ದು, ಕೆಲವೇ ಸಮಯಗಳಲ್ಲಿ ಅರಮನೆಗೆ ಉತ್ಸವ ಮೂರ್ತಿ ಬರಲಿದೆ. ಮೆರವಣಿಗೆಯುದ್ದಕ್ಕೂ ನಾದಸ್ವರ, ವಾದ್ಯ, ಚಂಡೆ ಸದ್ದುಗಳು ಮೇಳೈಸಿವೆ.
ನೆಟ್‌ಫ್ಲಿಕ್ಸ್ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸಿದ ಸಹರಾ ಸಮೂಹ
ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಈ ಬಾರಿ ಕುಡ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿದ್ದು, ಈ ಬಾರಿ ಉತ್ಸವ ಮೂರ್ತಿ ಮೆರವಣಿಗೆ ಇರುವುದು ವಿಶೇಷ. ಸಂಜೆ ನಡೆಯುವ ಜಂಬೂಸವಾರಿ ಮೆರವಣಿಗೆಯಲ್ಲಿ 750 ಕೆಜಿ ತೂಕದ ಜಿನ್ನದ ಅಂಬಾರಿಯನ್ನು ಹೊತ್ತು ಗಜರಾಜ ಸಾಗಲಿದ್ದಾನೆ. ಜೋಡಿ ನಂದಿಧ್ವಜ ಸ್ತಂಭಕ್ಕೆ ಸಿಎಂ ಬೊಮ್ಮಾಯಿ ಸಂಜೆ 4:30 ರಿಂದ 4:46ರ ಶುಭ ಮೀನ ಲಗ್ನದಲ್ಲಿ ಕೋಟೆ ಆಂಜನೇಯ ದೇಗುಲದ ಬಳಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.