ಶಾಲೆಯಲ್ಲಿ ತಮಗೆ ಹಿಜಾಬ್ ಅವಕಾಶ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನೆ ಅರ್ಜಿಯ ತೀರ್ಪು ಈಗ ಹೊರ ಬಿದ್ದಿದ್ದು, ಇಬ್ಬರು ನ್ಯಾಯಮೂರ್ತಿಗಳು ವಿಭಿನ್ನ ಅಭಿಪ್ರಾಯ ನೀಡಿದ್ದಾರೆ.
ನ್ಯಾಯಮೂರ್ತಿ ಹೇಮಂತ್ ಗುಪ್ತಾ, ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿ ವಜಾಗೊಳಿಸಿದ್ದರೆ, ನ್ಯಾಯಮೂರ್ತಿ ಹಿಮಾಂಶು, ಸರ್ಕಾರದ ಸಮವಸ್ತ್ರ ನೀತಿಯನ್ನು ಎತ್ತಿ ಹಿಡಿದಿದ್ದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಕರಣ ಮುಖ್ಯ ನ್ಯಾಯಮೂರ್ತಿಗಳ ಅಂಗಳಕ್ಕೆ ಹೋಗಿದ್ದು, ಇದರ ಮಧ್ಯೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ವಿಸ್ತೃತ ಪೀಠದ ತೀರ್ಪು ಬರುವವರೆಗೂ ಸಮವಸ್ತ್ರ ಧರಿಸುವ ಕುರಿತ ಸರ್ಕಾರದ ಆದೇಶ ಹಾಗೂ ಕರ್ನಾಟಕ ಹೈಕೋರ್ಟ್ ತೀರ್ಪು ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.
ಹೀಗಾಗಿ ವಿದ್ಯಾರ್ಥಿಗಳು ಶಾಲಾ ತರಗತಿ ಪ್ರವೇಶಿಸುವ ವೇಳೆ ಶಿಕ್ಷಣ ಸಂಸ್ಥೆಗಳು ನಿಗದಿಪಡಿಸಿರುವ ಸಮವಸ್ತ್ರವನ್ನೇ ಧರಿಸುವುದು ಕಡ್ಡಾಯವಾಗಿದೆ.