ಮಂಡ್ಯ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯಲ್ಲಿ ಮದರಸಾ ಶಿಕ್ಷಣ ಮುಂದುವರೆದಿದೆ. ಮೌಲ್ವಿಗಳು ವಿದ್ಯಾರ್ಥಿಗಳಿಗೆ ಧಾರ್ಮಿಕ ಪಾಠ ಬೋಧಿಸುತ್ತಿದ್ದಾರೆ. ಮಸೀದಿಯಲ್ಲಿನ ಮದರಸಾ ನಿಲ್ಲಿಸಬೇಕು ಎಂದು ಆಗ್ರಹಿಸಿ ಇಂದು ವಿಶ್ವ ಹಿಂದೂ ಪರಿಷತ್ ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಿದೆ.
ವಿವಾದದ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಪ್ರತಿಭಟನೆಗಳಿಗೆ, ಮೆರವಣಿಗೆಗೆ ಅವಕಾಶವಿಲ್ಲ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಮಂಡ್ಯ ಎಸ್ ಪಿ ಯತೀಶ್ ಎಚ್ಚರಿಕೆ ನೀಡಿದ್ದಾರೆ.
ಮಸೀದಿ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಶ್ರೀರಂಗಪಟ್ಟನದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದ್ದು, ಭದ್ರತೆಗೆ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಪ್ರತಿಭಟನೆಗಳಿಗೂ ಅವಕಾಶವಿಲ್ಲ. ಒಂದು ವೇಳೆ ನಿಷೇಧಾಜ್ಞೆ ಉಲ್ಲಂಘನೆ ಮಾಡಿ ಹಿಂದೂ ಪರ ಸಂಘಟನೆ ಪ್ರತಿಭಟನೆಗೆ ಮುಂದಾದರೆ ಮುಲಾಜಿಲ್ಲದೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ