ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ತಮ್ಮ ವೇತನ ಹೆಚ್ಚಳಕ್ಕಾಗಿ ಪ್ರತಿಭಟನೆಗಳು ನಡೆದಿದ್ದು, ಸರ್ಕಾರಿ ನೌಕರರ ಮುಷ್ಕರಕ್ಕೆ ಮಣಿದ ಸರ್ಕಾರ ಈಗಾಗಲೇ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಇದರ ಮಧ್ಯೆ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮಾರ್ಚ್ 16ರಂದು ಕೆಪಿಟಿಸಿಎಲ್ ಹಾಗೂ ಎಸ್ಕಾಂ ಗಳ ನೌಕರರು ಮತ್ತು ಮಾರ್ಚ್ 21ರಿಂದ ಸಾರಿಗೆ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದರು. ಇದರಿಂದ ಎಚ್ಚೆತ್ತುಕೊಂಡಿರುವ ಸರ್ಕಾರ ಬೇಡಿಕೆಗಳ ಈಡೇರಿಕೆಗೆ ಮುಂದಾಗಿದೆ.
ಹೀಗಾಗಿ ಕೆಪಿಟಿಸಿಎಲ್ ಹಾಗೂ ಎಲ್ಲಾ ಎಸ್ಕಾಂ ಗಳ ನೌಕರರಿಗೆ ಶೇಕಡ 20ರಷ್ಟು ಮತ್ತು ಸಾರಿಗೆ ನೌಕರರಿಗೆ ಶೇಕಡ 15ರಷ್ಟು ವೇತನ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದ್ದು, ಈ ಕುರಿತ ಅಧಿಕೃತ ಆದೇಶ ಇಂದೇ ಹೊರಬೀಳಲಿದೆ ಎಂದು ತಿಳಿದುಬಂದಿದೆ.