alex Certify BIG NEWS: ವೈದ್ಯರ ನಿರ್ಲಕ್ಷ್ಯ; ತಾಯಿ ಹಾಗೂ ಅವಳಿ ಮಕ್ಕಳು ಸೇರಿ ಮೂವರು ಬಲಿ; ತುಮಕೂರು ಜಿಲ್ಲಾಸ್ಪತ್ರೆ ವಿರುದ್ಧ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವೈದ್ಯರ ನಿರ್ಲಕ್ಷ್ಯ; ತಾಯಿ ಹಾಗೂ ಅವಳಿ ಮಕ್ಕಳು ಸೇರಿ ಮೂವರು ಬಲಿ; ತುಮಕೂರು ಜಿಲ್ಲಾಸ್ಪತ್ರೆ ವಿರುದ್ಧ ಆಕ್ರೋಶ

ತುಮಕೂರು: ತುಮಕೂರಿನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಜಿಲ್ಲಾಸ್ಪತ್ರೆಯ ವೈದ್ಯರ ನಿರ್ಲಕ್ಷಕ್ಕೆ ತಾಯಿ ಹಾಗೂ ಅವಳಿ ಗಂಡು ಮಕ್ಕಳು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ತುಮಕೂರಿನಲ್ಲಿ ಬಾಡಿಗೆ ಮನೆಯಲ್ಲಿ ಪುಟ್ಟ ಮಗಳೊಂದಿಗೆ ಕಸ್ತೂರಿ (30) ಎಂಬ ಗರ್ಭಿಣಿ ವಾಸವಾಗಿದ್ದರು. ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಂಜೆ ಸ್ಥಳೀಯರು ಆಟೋದಲ್ಲಿ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಮಹಿಳೆ ಬಳಿ ಆರ್ಧಾರ್ ಕಾರ್ಡ್, ತಾಯಿ ಕಾರ್ಡ್ ಇಲ್ಲ ಎಂದು ಆಸ್ಪತ್ರೆ ವೈದ್ಯರು ಮಹಿಳೆಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯುವಂತೆ ಹೇಳಿದ್ದಾರೆ. ಆದರೆ ಮಹಿಳೆ ಅಷ್ಟು ದೂರ ಹೋಗಲು ತನ್ನ ಬಳಿ ಹಣವಿಲ್ಲ. ಇದೇ ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳುವಂತೆ ಕೇಳಿಕೊಂಡಿದ್ದಾಳೆ. ಅಲ್ಲದೇ ಆಕೆಯೊಂದಿಗೆ ಬಂದ ಸ್ಥಳೀಯರು ಕೂಡ ಹೆರಿಗೆ ನೋವು ಆರಂಭವಾಗಿರುವುದರಿಂದ ಮಹಿಳೆಯನ್ನು ದಾಖಲಿಸಿಕೊಳ್ಳವಂತೆ ಮನವಿ ಮಾಡಿದ್ದಾರೆ. ಆದರೂ ಮಹಿಳೆಯನ್ನು ದಾಖಲಿಸಿಕೊಳ್ಳದೇ ಕಳುಹಿಸಿದ್ದಾರೆ.

ಹೆರಿಗೆ ನೋವು ಹೆಚ್ಚಾಗಿ ಮಹಿಳೆ ಭಾರತಿ ನಗರದ ಆಂಜನೇಯ ದೇಗುಲ ಬಳಿ ಇಂದು ಬೆಳಿಗ್ಗೆ ಒಂದು ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೇ ಮಹಿಳೆಗೆ ರಕ್ತಸ್ರಾವ ಹೆಚ್ಚಾಗಿದೆ. ಮಧ್ಯಾಹ್ನದ ವೇಳೆ ಮತ್ತೊಂದು ಗಂಡು ಮಗುವಿಗೆ ಜನ್ಮ ನೀಡಿ ಬಾಣಂತಿ ಸಾವನ್ನಪ್ಪಿದ್ದಾರೆ. ಕೆಲ ಸಮಯದಲ್ಲೇ ಅವಳಿ ಗಂಡು ಮಕ್ಕಳು ಕೂಡ ಉಸಿರು ಚೆಲ್ಲಿವೆ ಎಂದು ತಿಳಿದುಬಂದಿದೆ. ತಾಯಿ ಮಕ್ಕಳ ಸಾವಿಗೆ ತುಮಕೂರು ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ. ತುಮಕೂರು ಎನ್ ಇ ಪಿ ಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...