ಬೆಂಗಳೂರು: ಮತದಾರರ ಪಟ್ಟಿ ಗೋಲ್ ಮಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆ ಮೇಲೆ ಪೊಲೀಸರು ನಡೆಸಿದ ದಾಳಿ ವೇಳೆ ಸಚಿವರಿಗೆ ಸೇರಿದ ಲೆಟರ್ ಹೆಡ್, ಚೆಕ್ ಪತ್ತೆಯಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ವೋಟರ್ ಐಡಿ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆ ವಿರುದ್ಧ ಪ್ರಕರಣ ದಾಖಲಾಗಿದ್ದು, ಸಂಸ್ಥೆಯ 6 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ನಡುವೆ ಪೊಲೀಸರು ಸಂಸ್ಥೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ದಾಳಿ ವೇಳೆ ಸಚಿವರ ಲೆಟರ್ ಹೆಡ್, ಚೆಕ್ ಹಾಗೂ ಹೊಂಬಾಳೆ ಸಂಸ್ಥೆಗೆ ಸೇರಿದ ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಸಧ್ಯ ಪತ್ತೆಯಾದ ಚೆಕ್ ಹಾಗೂ ಲೆಟರ್ ಹೆಡ್ ಯಾವ ಸಚಿವರದ್ದು ಎಂಬುದೇ ಕುತೂಹಲಕ್ಕೆ ಕಾರಣವಾಗಿದೆ.