alex Certify BIG NEWS: ವ್ಯಾಪಾರಂ ದ್ರೋಹ ಚಿಂತನಂ; ಬಿಜೆಪಿಯ ಧನದಾಹಕ್ಕೆ ರಾಷ್ಟ್ರಧ್ವಜ ವಿರೂಪ; ಹಣಕ್ಕಾಗಿ ಕಳಪೆ ಧ್ವಜ ಮಾರಾಟ ಮಾಡಿ ದೇಶದ್ರೋಹ; ಕಾಂಗ್ರೆಸ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವ್ಯಾಪಾರಂ ದ್ರೋಹ ಚಿಂತನಂ; ಬಿಜೆಪಿಯ ಧನದಾಹಕ್ಕೆ ರಾಷ್ಟ್ರಧ್ವಜ ವಿರೂಪ; ಹಣಕ್ಕಾಗಿ ಕಳಪೆ ಧ್ವಜ ಮಾರಾಟ ಮಾಡಿ ದೇಶದ್ರೋಹ; ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ಆರ್ ಎಸೆಸ್ ಹಾಗೂ ಬಿಜೆಪಿ ತಮ್ಮೊಳಗಿನ ತಿರಂಗಾ ದ್ವೇಷವನ್ನು ತೀರಿಸಿಕೊಳ್ಳಲೆಂದೇ ಧ್ವಜ ಸಂಹಿತೆಯನ್ನು ಬದಲಿಸಿ ರಾಷ್ಟ್ರಧ್ವಜದ ಘನತೆಯನ್ನು ಕುಗ್ಗಿಸುತ್ತಿವೆ ಎಂದು ರಾಜ್ಯ ಕಾಂಗ್ರೆಸ್ ಘಟಕ ವಾಗ್ದಾಳಿ ನಡೆಸಿದೆ.

ಪ್ರಚಾರದ ಹುಚ್ಚಿಗಾಗಿ ಕಳಪೆ ಮತ್ತು ಹಾಳಾದ ಧ್ವಜಗಳನ್ನು ಮಾರಾಟ ಮಾಡಿದ್ದು ದೇಶಕ್ಕೆ ಎಸಗಿದ ಮಹಾನ್ ದ್ರೋಹ. ಒಳಗೆ ತಿರಂಗಾ ದ್ವೇಷ, ಹೊರಗೆ ನಾಟಕ. ಪಕ್ಷದ ನಿಷ್ಠೆ, ಭಕ್ತಿ, ಪ್ರೀತಿ ಭಗವಾಧ್ವಜಕ್ಕೊ, ರಾಷ್ಟ್ರಧ್ವಜಕ್ಕೋ? ಮೊದಲು ಸ್ಪಷ್ಟಪಡಿಸಿ ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಆಗ್ರಹಿಸಿದೆ.

ಬಿಜೆಪಿಗೆ ನಿಜವಾಗಿಯೂ ತಿರಂಗಾ ಪ್ರೇಮ ಇದ್ದರೆ ಭಗವಾಧ್ವಜವನ್ನೇ ರಾಷ್ಟ್ರಧ್ವಜವನ್ನಾಗಿ ಬದಲಿಸುತ್ತೇವೆ ಎಂದ ಶಾಸಕರಾದ ಈಶ್ವರಪ್ಪ, ಹರೀಶ್ ಪೂಂಜಾರ ಮೇಲೆ ಯಾವ ಕ್ರಮ ಕೈಗೊಂಡಿದೆ ಹೇಳಲಿ ಎಂದು ಪ್ರಶ್ನಿಸಿದೆ.

ದೇಶದ ಆಸ್ತಿಗಳ ನಂತರ ಈಗ ರಾಷ್ಟ್ರಧ್ವಜದ ವ್ಯಾಪಾರಕ್ಕೂ ಇಳಿದಿದೆ ಬಿಜೆಪಿ! ರಾಷ್ಟ್ರಧ್ವಜ ಘನತೆಯನ್ನು ಬದಿಗೆ ಸರಿಸಿ ಮಾರಾಟದ ಸರಕನ್ನಾಗಿ ಮಾಡಿಕೊಂಡಿದೆ. ವಿರೂಪಗೊಂಡ ಧ್ವಜ ಮಾರುತ್ತಿರುವ ಬಿಜೆಪಿ ₹25 ನಿಗದಿಪಡಿಸಿದೆ, ರಸೀದಿ ನೀಡುತ್ತಿಲ್ಲ, ಧ್ವಜಗಳು ನಿಯಮಾನುಸಾರವಿಲ್ಲ. ವ್ಯಾಪಾರಕ್ಕೆ ರಾಷ್ಟ್ರಧ್ವಜವೇ ಬೇಕಿತ್ತೇ?. ‘ವ್ಯಾಪಾರಂ ದ್ರೋಹ ಚಿಂತನಂ’ ಎಂಬ ಮಾತಿದೆ, ಅಂತೆಯೇ ವ್ಯಾಪಾರಿ ಪಕ್ಷ ಹಣ ಕೊಳ್ಳೆ ಹೊಡೆಯಲು ಕಳಪೆ ಧ್ವಜ ಮಾರಾಟದ ಮೂಲಕ ರಾಷ್ಟ್ರಧ್ವಜಕ್ಕೆ, ದೇಶಕ್ಕೆ ದ್ರೋಹವೆಸಗುತ್ತಿದೆ. ಬಿಜೆಪಿಯ ಹಣದಾಹಕ್ಕೆ ರಾಷ್ಟ್ರಧ್ವಜ ವಿರೂಪವಾಗುತ್ತಿರುವುದು ಸಹಿಸಲಾಗದ ಸಂಗತಿ. ಬಿಜೆಪಿಯ ಪ್ರಚಾರದ ತೆವಲಿಗೆ ಧ್ವಜದ ಘನತೆ ಬಲಿಯಾಗದಿರಲಿ ಎಂದು ಕಿಡಿಕಾರಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...