ರಾಮನಗರ: ಹಿಜಾಬ್, ಕೇಸರಿ ಶಾಲು ವಿಚಾರವಾಗಿ ಯಾರಾದರೂ ಶಾಂತಿ ಕದಡುವ ಯತ್ನ ನಡೆಸಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಮನಗರ ಎಸ್ ಪಿ ಸಂತೋಷ್ ಬಾಬು ತಿಳಿಸಿದ್ದಾರೆ.
ಹಿಜಾಬ್ ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಧಾರ್ಮಿಕ ಮುಖಂಡರ ಶಾಂತಿ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು, ಹಿಂದೂ-ಮುಸ್ಲಿಂರು ಸಾಮರಸ್ಯದಿಂದ ಬದುಕುತ್ತಿದ್ದಾರೆ. ಅಣ್ಣ-ತಮ್ಮಂದಿರಂತೆ ಇದ್ದಾರೆ. ಯಾರಾದರೂ ಜಿಲ್ಲೆಯಲ್ಲಿ ಶಾಂತಿ ಕದಡುವ ಯತ್ನ ನಡೆಸಿದರೆ ಹುಷಾರ್….! ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.
ಧಮ್ ಇದ್ರೆ ಯಾರಾದರೂ ಅಶಾಂತಿ ಮೂಡಿಸುವ ಯತ್ನ ಮಾಡಿ ನೋಡೋಣ, ಯಾಕಾದರೂ ತಪ್ಪು ಮಾಡಿದ್ವಿ, ಯಾಕಾದರೂ ಹುಟ್ಟಿದೆವು ಅಂತ ಅನ್ನಿಸ್ಬೇಕು….. ಹಾಗೆ ಮಾಡ್ತೀನಿ. ನಮ್ಮ ಜಿಲ್ಲೆ, ಶಾಂತಿ ಕಾಪಾಡುವುದು ನಮ್ಮ ಕರ್ತವ್ಯ. ನನಗೆ ಈ ಜಿಲ್ಲೆಯ ಮೇಲೆ ವಿಶೇಷ ಪ್ರೀತಿ ಗೌರವ ಇದೆ. ಜಿಲ್ಲೆಯಲ್ಲಿ ಕೋಮುಸಾಮರಸ್ಯ ಕದಡುವ ಪ್ರಯತ್ನ ಮಾಡಿದರೆ ಯಾರನ್ನೂ ಬಿಡುವುದಿಲ್ಲ ಎಂದು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.