ಬಾಗಲಕೋಟೆ: ಟ್ರ್ಯಾಕ್ಟರ್ ಓವರ್ ಟೇಕ್ ಮಾಡಲು ಹೋಗಿ ಶಾಲಾ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿರುವ ಘಟನೆ ಬಾಗಲಕೋಟೆ ಜಿಲ್ಲೆ ಬನಹಟ್ಟಿ ಪೊಲೀಸ್ ಠಾಣೆ ಬಳಿ ನಡೆದಿದೆ.
ಪೂರ್ಣಪ್ರಜ್ಞಾ ಆಂಗ್ಲ ಮಾಧ್ಯಮ ಶಾಲೆಯ ಬಸ್ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಓವರ್ ಟೇಕ್ ಮಾಡಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿದ್ದ 20ಕ್ಕೂ ಹೆಚ್ಚು ಮಕ್ಕಳು ಅದೃಷ್ಟವಶಾತ್ ಬಚಾವಾಗಿದ್ದಾರೆ.
ಉಯ್ಯಾಲೆ ಮುಖಾಂತರ ಅದ್ಭುತ ಎಂಟ್ರಿ ಕೊಡಲು ಹೋಗಿ ಕೆಳಗೆ ಬಿದ್ದ ನವಜೋಡಿ: ವಿಡಿಯೋ ವೈರಲ್
ಬಸ್ ನಲ್ಲಿದ್ದ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.