BIG NEWS: ಶಾಲಾ ಮಕ್ಕಳ ಸಮವಸ್ತ್ರ ಹಂಚಿಕೆಯಲ್ಲಿ ಗೋಲ್ ಮಾಲ್; ಕೋಟ್ಯಂತರ ರೂಪಾಯಿ ವಂಚನೆ

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳ ಸಮವಸ್ತ್ರ ಹಂಚಿಕೆಯಲ್ಲಿ ಕೋಟಿ ಕೋಟಿ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿದೆ. ಕಳಪೆ ಗುಣಮಟ್ಟದ ಸಮವಸ್ತ್ರ ನೀಡಿ ವಂಚನೆ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಅಕ್ರಮದ ಬಗ್ಗೆ ಜವಳಿ ಆಯುಕ್ತರ ಪಿಎ ಬಿ.ಶ್ರೀಧರ್ ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಗುಣಮಟ್ಟದ ಸಮವಸ್ತ್ರ ನೀಡದೇ ಹಣ ಗುಳುಂ ಮಾಡಿದ್ದಾರೆ.

ಕೈಮಗ್ಗ ಅಭಿವೃದ್ಧಿ ನಿಗಮದ ಹಿಂದಿನ ವ್ಯವಸ್ಥಾಪಕ ಮುದ್ದಯ್ಯ ಎಸ್, ಶ್ರೀಧರ್, ಲಕ್ಷ್ಮಣ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 406, 420 ಅಡಿ ಕೇಸ್ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read