ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಮೊದಲ ಹಂತದಲ್ಲಿ ಸರ್ಕಾರಿ ಶಾಲೆಗಳನ್ನು ಆರಂಭಿಸುವಂತೆ ತಜ್ಞರ ಸಮಿತಿ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ.
ರಾಜ್ಯದಲ್ಲಿ 50ಕ್ಕಿಂತ ಕಡಿಮೆ ಮಕ್ಕಳಿರುವ 22 ಸಾವಿರ ಸರ್ಕಾರಿ ಶಾಲೆಗಳಿವೆ. ಅವುಗಳಲ್ಲಿ 5-6 ಕೊಠಡಿಗಳಿದ್ದು ಒಂದೊಂದು ಕೊಠಡಿಗಳಲ್ಲಿ 8-10 ವಿದ್ಯಾರ್ಥಿಗಳಿಗೆ ಪಾಠ-ಪ್ರವಚನ ಮಾಡುವಂತೆ ಹಾಗೂ ದೈಹಿಕ ಅಂತರ, ಮಾಸ್ಕ್, ಕಡ್ಡಾಯವಾಗಿದ್ದು, ಸುರಕ್ಷಿತವಾಗಿ ಶಾಲೆಗಳನ್ನು ಆರಂಭಿಸಬೇಕು ಎಂದು ಸಲಹೆ ನೀಡಿದೆ.
ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಐತಿಹಾಸಿಕ ಗರಿಷ್ಠ ಮಟ್ಟಕ್ಕೇರಿದ ಪೆಟ್ರೋಲ್, ಡೀಸೆಲ್ ದರ
ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ದೈಹಿಕ ಅಂತರ ಪಾಲನೆ ಕಷ್ಟ. ಅಲ್ಲದೇ ಬಹುತೇಕ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳನ್ನು ಅವಲಂಬಿಸಿರುವುದರಿಂದ ಹಳ್ಳಿಗಳಲ್ಲಿ ಆನ್ ಲೈನ್ ಕ್ಲಾಸ್ ಸೌಲಭ್ಯವಿಲ್ಲ ಅಲ್ಲದೇ ಭೌತಿಕ ತರಗತಿ ಹೊರತಾಗಿ ಆ ಮಕ್ಕಳಿಗೆ ಬೇರೆ ಸೌಲಭ್ಯಗಳಿಲ್ಲದಿರುವುದರಿಂದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸುರಕ್ಷಿತಾ ಕ್ರಮ ಕೈಗೊಂಡು ಶಾಲೆಗಳನ್ನು ಆರಂಭಿಸುವಂತೆ ಸೂಚಿಸಿದ್ದಾರೆ.