alex Certify BIG NEWS: ಶಾಲೆಗಳಿಗೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಲೆಗಳಿಗೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ಅದರಲ್ಲಿಯೂ ಶಾಲೆ – ಕಾಲೇಜುಗಳಲ್ಲಿನ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರವು ಶಾಲೆಗಳಿಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಹೊಸ ಮಾರ್ಗಸೂಚಿಯಂತೆ ವಿದ್ಯಾರ್ಥಿಗಳು ತರಗತಿಗೆ ಬರುವುದು ಕಡ್ಡಾಯವಲ್ಲ. ಶಾಲೆಗಳು ಭೌತಿಕ ತರಗತಿಯೊಂದಿಗೆ ಆನ್ ಲೈನ್ ಸೇರಿದಂತೆ ಪರ್ಯಾಯ ಮಾರ್ಗದಲ್ಲಿ ತರಗತಿ ನಡೆಸಬೇಕು. ವಿದ್ಯಾರ್ಥಿಗಳು ತಮಗೆ ಇಷ್ಟವಾದ ರೀತಿಯಲ್ಲಿ ತರಗತಿಗೆ ಹಾಜರಾಗಬಹುದು. ಯಾವ ವಿದ್ಯಾರ್ಥಿಗಳಿಗೂ ಶಾಲೆಗೆ ಬರುವಂತೆ ಶಿಕ್ಷಕರು ಒತ್ತಾಯ ಮಾಡುವಂತಿಲ್ಲ. ವಿದ್ಯಾರ್ಥಿಗಳು ಶಾಲೆಗೆ ಬರುವುದಕ್ಕೆ ಪಾಲಕರ ಅನುಮತಿ ಕಡ್ಡಾಯಗೊಳಿಸಲಾಗಿದೆ.

ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ತರಗತಿಗಳು ನಡೆಯುತ್ತವೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30ರ ವರೆಗೆ ಮಾತ್ರ ಶಾಲಾ ಅವಧಿ ಇರುತ್ತದೆ. ಶೇ.50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಬೇಕು. 15 ರಿಂದ 20 ವಿದ್ಯಾರ್ಥಿಗಳ ಗುಂಪು ರಚಿಸಿ, ಒಂದು ದಿನ ತರಗತಿ, ಒಂದು ದಿನ ರಜೆಯ ವ್ಯವಸ್ಥೆಯಂತೆ ಶಿಕ್ಷಕರು ಪಾಠ ಮಾಡಬೇಕು. ಶನಿವಾರ ಹಾಗೂ ಭಾನುವಾರ ಶಾಲಾ ಕೊಠಡಿಗಳನ್ನು ಸ್ವಚ್ಛಗೊಳಿಸಲೇಬೇಕು ಎಂದು ಸರ್ಕಾರ ಮಾರ್ಗಸೂಚಿಯಲ್ಲಿ ಹೇಳಿದೆ.

ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. ಎರಡೂ ಡೋಸ್ ಪಡೆದ ಶಿಕ್ಷಕರಿಗೆ ಮಾತ್ರ ಪಾಠ ಮಾಡಲು ಅವಕಾಶ ನೀಡಬೇಕು. ಶಾಲೆಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಈ ರೀತಿ ಕಟ್ಟುನಿಟ್ಟಾಗಿ ಶಾಲೆಗಳನ್ನು ಆರಂಭಿಸಬೇಕು ಎಂದು ಸರ್ಕಾರ ಎಲ್ಲ ಶಾಲೆಗಳಿಗೆ ಎಚ್ಚರಿಕೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...