ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿದೆಯಾದರೂ ಶಾಲಾ-ಕಾಲೇಜುಗಳು ಆರಂಭವಾಗಿರುವ ಬೆನ್ನಲ್ಲೇ ಮಕ್ಕಳಲ್ಲಿ ಸೋಂಕು ಹೆಚ್ಚುತ್ತಿದೆ. ಇದೀಗ ಬೆಣ್ಣೆ ನಗರಿ ದಾವಣಗೆರೆ ಜಿಲ್ಲೆಯಲ್ಲಿ 14 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ.
ಶಾಲೆ ಆರಂಭವಾದಾಗಿನಿಂದ 14 ಮಕ್ಕಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದು, ಮಕ್ಕಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ತಿಳಿಸಿದ್ದಾರೆ.
ʼಅಲೆಕ್ಸಾʼ ಗಣಪತಿ ಭಜನೆ ಹೇಳು ಎಂದ ಅಜ್ಜಿ…..! ವಿಡಿಯೋ ವೈರಲ್
ಸೋಂಕು ದೃಢಪಟ್ಟ ಮಕ್ಕಳಿಗೆ ಪೋಷಕರಿಂದಲೇ ವೈರಸ್ ಹರಡಿದೆ. ಸದ್ಯಕ್ಕೆ ಮಕ್ಕಳಿಗೆ ಯಾವುದೇ ಸಮಸ್ಯೆಯಿಲ್ಲ. ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಈ ನಡುವೆ ಕಲಬುರ್ಗಿ ಜಿಲ್ಲೆಯಲ್ಲಿ ಡೆಂಘೀ, ವೈರಲ್ ಫೀವರ್ ಹೆಚ್ಚುತ್ತಿದ್ದು, ಮಕ್ಕಳಿಂದ ಹಿಡಿದು ವೃದ್ಧರವರೆಗೂ ಜ್ವರದಿಂದ ಬಳಲುತ್ತಿದ್ದಾರೆ. ಆಗಸ್ಟ್ ಒಂದೇ ತಿಂಗಳಲ್ಲಿ ಜಿಲ್ಲೆಯಲ್ಲಿ 158 ಜನರಲ್ಲಿ ಡೆಂಘೀ ಪತ್ತೆಯಾಗಿದೆ. ಜನವರಿಯಿಂದ ಆಗಸ್ಟ್ ವರೆಗೆ 266 ಜನರಿಗೆ ಡೆಂಘಿ ಕಾಣಿಸಿಕೊಂಡಿದೆ. ಹಾಗಾಗಿ ಜಿಲ್ಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.