ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಶಾಲೆಗಳನ್ನು ತೆರೆಯಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರದಿಂದ ಶಾಲೆಗಳು ಪುನರಾರಂಭವಾಗಲಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರದಿಂದ ಶಾಲೆಗಳು ಪುನರಾರಂಭಗೊಳ್ಳಲಿದೆ ಎಂದು ತಿಳಿಸಿದರು.
ಇಂದು ನಡೆದ ಸಭೆಯಲ್ಲಿ ಶಾಲೆ ತೆರೆಯಲು ಅನುಮತಿ ನೀಡಲಾಗಿದೆ. ಶಾಲೆಗಳಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಮಾರ್ಗಸೂಚಿಯನ್ವಯ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಹೇಳಿದರು.