ಪುತ್ತೂರು: ಶಾಸಕರ ಜೊತೆ ಮಹಿಳೆಯೊಬ್ಬರ ಫೋಟೋ ವೈರಲ್ ಆಗಿದ್ದು, ವಿಧಾನಸಭಾ ಚುನಾವಣೆ ಹೊತ್ತಲ್ಲೇ ಹೊಸ ಚರ್ಚೆಗೆ ಗ್ರಾಸವಾಗಿದೆ.
ಶಾಸಕರ ಜೊತೆ ಅಶ್ಲೀಲವಾಗಿ ಮಹಿಳೆಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮಹಿಳೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ತನ್ನ ಫೋಟೋವನ್ನು ಎಡಿಟ್ ಮಾಡಿ ಈ ರೀತಿ ವೈರಲ್ ಮಾಡಲಾಗಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಿಳೆ ದೂರು ನೀಡಿದ್ದಾರೆ. ಐಟಿ ಆಕ್ಟ್ ಪ್ರಕಾರ ಎಫ್ ಐ ಆರ್ ದಾಖಲಾಗಿದೆ.