alex Certify BIG NEWS: ಶಾಸಕರ ಅಭಿಪ್ರಾಯ ಆಲಿಸಲು ಪ್ರತ್ಯೇಕ ವ್ಯವಸ್ಥೆ ಮಾಡಿ; ವರಿಷ್ಠರಿಗೆ ಶಾಸಕ ಸುನೀಲ್ ಕುಮಾರ್ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕರ ಅಭಿಪ್ರಾಯ ಆಲಿಸಲು ಪ್ರತ್ಯೇಕ ವ್ಯವಸ್ಥೆ ಮಾಡಿ; ವರಿಷ್ಠರಿಗೆ ಶಾಸಕ ಸುನೀಲ್ ಕುಮಾರ್ ಆಗ್ರಹ

ಬೆಂಗಳೂರು; ನಾಯಕತ್ವ ಬದಲಾವಣೆ ವಿಚಾರದ ಚರ್ಚೆ ಬೆನ್ನಲ್ಲೇ ಇದೀಗ ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿಕೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಕಳೆದ 3 ದಿನದಿಂದ ಮಾಧ್ಯಮದಲ್ಲಿ ಬರುತ್ತಿರುವ ಹೇಳಿಕೆಗಳು ಪಕ್ಷದ ಹಿತದೃಷ್ಟಿಯಿಂದ ಒಳಿತಲ್ಲ. ಈ ಅಭಿಪ್ರಾಯಗಳೇ ಎಲ್ಲಾ ಶಾಸಕರ, ಕಾರ್ಯಕರ್ತರ ಅಭಿಪ್ರಾಯ ಆಗುವುದಿಲ್ಲ. ನಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲವಾದ್ದರಿಂದ ಪಕ್ಷದ ವರಿಷ್ಠರು ಅಭಿಪ್ರಾಯ ಆಲಿಸಲು ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ.

ನಾಯಕತ್ವ ಬದಲಾವಣೆ ಅಥವಾ ಸಿಎಂ ಯಡಿಯೂರಪ್ಪನವರ ಪರ-ವಿರೋಧವಾಗಲಿ ಸಚಿವರು, ಶಾಸಕರು ಯಾರೂ ಕೂಡ ಹೇಳಿಕೆ ನೀಡಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೂಚಿಸಿರುವ ನಡುವೆಯೇ ಶಾಸಕ ಸುನೀಲ್ ಕುಮಾರ್ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...