alex Certify BIG NEWS: ಶಾಸಕರ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ ದುಷ್ಕರ್ಮಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕರ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ ದುಷ್ಕರ್ಮಿಗಳು

ಮಂಗಳೂರು: ಶಾಸಕ ಹರೀಶ್ ಪೂಂಜಾ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಬೆದರಿಕೆಯೊಡ್ಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ.

ತಡರಾತ್ರಿ ಈ ಘಟನೆ ನಡೆದಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಮಂಗಳೂರಿನಿಂದ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಫರಂಗಿಪೇಟೆ ಬಳಿ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ.

ಸ್ಕಾರ್ಪಿಯೋ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ತೋರಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆಯೊಡ್ಡಿದ್ದಾರೆ. ಈ ಬಗ್ಗೆ ಹರೀಶ್ ಪೂಂಜಾ ಕಾರಿನ ಚಾಲಕ ನವೀನ್ ಎಂಬಾತ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...