alex Certify BIG NEWS: ಶಾಸಕರ ಪುತ್ರನಿಂದ ಮುಖ್ಯೋಪಾದ್ಯಾಯರಿಗೆ ಬೆದರಿಕೆ; ದೂರು ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕರ ಪುತ್ರನಿಂದ ಮುಖ್ಯೋಪಾದ್ಯಾಯರಿಗೆ ಬೆದರಿಕೆ; ದೂರು ದಾಖಲು

ಕಲಬುರ್ಗಿ: ಶಾಸಕ ಎಂ.ವೈ.ಪಾಟೀಲ್ ಅವರ ಪುತ್ರ ಮುಖ್ಯೋಪಾಧ್ಯಾಯರಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ಅವರ ಪುತ್ರ ಅರುಣ್ ಪಾಟೀಲ್, ಸರ್ಕಾರಿ ಶಾಲೆ ಮುಖ್ಯೋಪಾಧ್ಯಾರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಮುಖ್ಯೋಪಾಧ್ಯಾಯ ಶಿವಕುಮಾರ್, ಅಫಜಲಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅಫಜಲಪುರದ ಮಾಶಾಳ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾಗಿರುವ ಶಿವಕುಮಾರ್ ಅವರಿಗೆ ಅರುಣ್ ಪಾಟೀಲ್ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ತಮ್ಮ ಜೊತೆ ಮಾತನಾಡಿರುವ ಆಡಿಯೋ ಕೂಡ ಇದೆ ಎಂದು ಶಿವಕುಮಾರ್ ಪೊಲೀಸ್ ಠಾಣೆಗೆ ನೀಡಿದ್ದಾರೆ. ನಾನು ಶಾಲೆಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಬೇಕು. ನೀನು ಶಾಲೆಯಿಂದ ಜಾಗ ಖಾಲಿ ಮಾಡು ಇಲ್ಲವಾದಲ್ಲಿ ನಿನ್ನನ್ನು ನೋಡಿಕೊಳ್ತೇನೆ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...