ಮುಂಬೈ: ಮಾಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕೊನೇ ಹಂತ ತಲುಪಿದ್ದು, ನಾಳೆ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ವಿಶ್ವಾಸಮತ ಯಾಚನೆ ಮಾಡಲಿದೆ. ಇದರ ಬೆನ್ನಲ್ಲೇ ಬಿಜೆಪಿ ಚಟುವಟಿಕೆಗಳು ಗರಿಗೆದರಿದೆ.
ಮೇಲ್ನೋಟಕ್ಕೆ ಮಹಾ ಅಘಾಡಿ ಸರ್ಕಾರ ಬಹುಮತ ಕಳೆದುಕೊಂಡಿದ್ದು, ನಾಳೆ ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತು ಪಡಿಸುವಂತೆ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಸಿಎಂ ಉದ್ಧವ್ ಠಾಕ್ರೆಗೆ ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ವಿಶ್ವಾಸಮತಯಾಚನೆಗೆ ಸಿದ್ಧತೆ ನಡೆಸಿದೆ.
ಇದರ ಬೆನ್ನಲ್ಲೇ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ, ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ನಾಳೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಬಿಜೆಪಿ ಶಾಸಕರಾರೂ ಮುಂಬೈ ಬಿಟ್ಟು ಹೋಗದಂತೆ ಖಡಕ್ ಸೂಚನೆ ನೀಡಲಾಗಿದ್ದು, 106 ಶಾಸಕರು ಕೂಡ ತಕ್ಷಣ ಮುಂಬೈಗೆ ಬರಬೇಕು ಎಂದು ತಿಳಿಸಲಾಗಿದೆ.
ಒಟ್ಟಾರೆ ನಾಳೆ ಮಹಾರಾಷ್ಟ್ರ ಮಹಾ ವಿಕಾಸ ಅಘಾಡಿ ಸಂರ್ಕಾರದ ಅಗ್ನಿಪರೀಕ್ಷೆ ನಡೆಯಲಿದ್ದು, ವಿಶ್ವಾಸಮತಯಾಚನೆಯಲ್ಲಿ ಉದ್ಧವ್ ಠಾಕ್ರೆ ಸರ್ಕಾರ ಗೆಲ್ಲಲಿದೆಯೇ ಕಾದುನೋಡಬೇಕಿದೆ.