ಬೆಳಗಾವಿ: ವಿಧಾನಪರಿಷತ್ ಚುನಾವಣೆಗೆ ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ನಡುವೆ ಭಾರಿ ಪೈಪೋಟಿ ಏರ್ಪಟ್ಟಿದ್ದು, ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.
ಪರಿಷತ್ ಚುನಾವಣೆಗೆ ರಮೇಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಮಹಾಂತೇಶ್ ಕವಟಿಗಿಮಠ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಸಹೋದರನಿಗೆ ಬಿಜೆಪಿ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ಭಾರಿ ಕಸರತ್ತು ನಡೆಸಿದ್ದ ರಮೇಶ್ ಜಾರಕಿಹೊಳಿಗೆ ಹಿನ್ನಡೆಯಾಗಿದ್ದು, ತೀವ್ರ ಅಸಮಾಧಾನಗೊಂಡಿದ್ದಾರೆ.
ನಟ ಕಾರ್ತಿಕ್ ಆರ್ಯನ್ ಗೆ ಎದೆ ಮೇಲಿನ ಹಚ್ಚೆ ಪ್ರದರ್ಶಿಸಿದ ಮಹಿಳಾ ಅಭಿಮಾನಿ..!
ಈ ನಡುವೆ ಇಂದು ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ನಾಮಪತ್ರ ಸಲ್ಲಿಸಿದ್ದು, ರಮೇಶ್ ಜಾರಕಿಹೊಳಿ ಕೂಡ ಸಾಥ್ ನೀಡಿದ್ದಾರೆ. ಲಖನ್ ಜಾರಕಿಹೊಳಿಗೆ ಬಿಜೆಪಿ ಟಿಕೆಟ್ ಸಿಗದ ವಿಚಾರವಾಗಿ ಹಾಗೂ ಪ್ರತಿಸ್ಪರ್ಧಿಯಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚೆನ್ನರಾಜ್ ಹಟ್ಟಿಹೋಳಿಗೆ ಕಾಂಗ್ರೆಸ್ ಟಿಕೆಟ್ ನೀಡಿದ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಆಕ್ರೋಶ ವ್ಯಕ್ತಪಡಿಸಿರುವ ರಮೇಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಹೆಸರು ಕೇಳುತ್ತಿದ್ದಂತೆಯೇ ಥೂ….ಥೂ……ಎಂದು ಸಿಡಿಮಿಡಿಗೊಂಡ ಘಟನೆ ನಡೆದಿದೆ.
ಚೆನ್ನರಾಜ್ ಹಟ್ಟಿಹೋಳಿ ಸ್ಪರ್ಧೆ ವಿಚಾರವಾಗಿ ಸಿಡಿಮಿಡಿಗೊಂಡಿರುವ ರಮೇಶ್ ಜಾರಕಿಹೊಳಿ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಕೋಪಗೊಂಡು ಗೊಣಗುತ್ತಲೇ ಸ್ಥಳದಿಂದ ತೆರಳಿದ ಘಟನೆ ನಡೆದಿದೆ.