alex Certify BIG NEWS: ಶಾಸಕ ನೆಹರು ಓಲೇಕಾರ್ ಗೆ ಬಿಗ್ ರಿಲೀಫ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕ ನೆಹರು ಓಲೇಕಾರ್ ಗೆ ಬಿಗ್ ರಿಲೀಫ್

ಬೆಂಗಳೂರು: ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ. 2 ವರ್ಷ ಜೈಲು ಶಿಕ್ಷೆ ತೀರ್ಪಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ನಕಲಿ ಬಿಲ್ ಪ್ರಕರಣದಲ್ಲಿ ದೋಷಿಯಾಗಿದ್ದ ಶಾಸಕ ನೆಹರು ಓಲೇಕಾರ್ ಅವರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಈ ಹಿಂದೆ ಆದೇಶ ಹೊರಡಿಸಿತ್ತು. ಇದೀಗ ಈ ತೀರ್ಪಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

2008 ಹಾಗೂ 2013ರ ಅವಧಿಯಲ್ಲಿ ನೆಹರು ಓಲೇಕಾರ್ ಅವರು ಸರ್ಕಾರದ ಸಿವಿಲ್ ಕೆಲಸಗಳನ್ನು ಬೇರೆಯವರಿಗೆ ಸಿಗದಂತೆ ಮಾಡಿ ತಮ್ಮ ಇಬ್ಬರು ಪುತ್ರರಿಗೆ ಕೊಡಿಸಿದ್ದರು. ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿ, ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು. ತನಿಖೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಶಾಸಕರ ವಿರುದ್ಧ ಭ್ರಷ್ಟಾಚಾರ ಕಾಯ್ದೆಯಡಿ ಚಾರ್ಜ್ ಶೀಟ್ ಸಲ್ಲಿಸಿದ್ದರು ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ ನೆಹರು ಓಲೇಕಾರ್ ಅವರಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿತ್ತು. ಅವರ ಇಬ್ಬರು ಮಕ್ಕಳಿಗೂ ದಂಡ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಶಾಸಕ ಓಲೇಕಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...