ಬೆಂಗಳೂರು: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮೇಲೆ ಲೋಕಾಯುಕ್ತ ದಾಳಿ ಪ್ರಕರಣದಲ್ಲಿ ಶಾಸಕರೂ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.
ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಆದೇಶ ನೀಡಿರುವ ಲೋಕಾಯುಕ್ತ ನ್ಯಾಯಾಲಯ, ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.
ಲೋಕಾಯುಕ್ತ ನ್ಯಾಯಮೂರ್ತಿ ಕೆ.ಲಕ್ಷ್ಮಿನಾರಯನ ಭಟ್ ಆದೇಶ ನೀಡಿದ್ದು, ಎಫ್ ಐ ಆರ್ ಪ್ರತಿಯನ್ನು ಮುಚ್ಚಿದ ಲಕೋಟೆಯಲ್ಲಿ ನೀಡುವಂತೆ ಸೂಚಿಸಿದ್ದಾರೆ. ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬಂಧನ ಭೀತಿ ಎದುರಾಗಿದ್ದು, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.