
ಬೆಂಗಳೂರು: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು 5 ದಿನಗಳ ಕಾಲ ಲೋಕಾಯುಕ್ತ ಕಸ್ಟಡಿಗೆ ವಹಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ನಿನ್ನೆ ಬಂಧಿಸಲ್ಪಟ್ಟಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಇಂದು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಈ ವೇಳೆ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಏಪ್ರಿಲ್ 1ರವರೆಗೆ ಲೋಕಾಯುಕ್ತ ಕಸ್ಟಡಿಗೆ ಒಪ್ಪಿಸಿ ಜಡ್ಜ್ ಬಿ.ಜಯಂತ್ ಕುಮಾರ್ ಆದೇಶ ಹೊರಡಿಸಿದ್ದಾರೆ.