ಬೆಂಗಳೂರು: ಸಿಎಂ ಆಗಲು 2,500 ಕೋಟಿ ರೂಪಾಯಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಆಕ್ಷೇಪಾರ್ಹ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಬಿಜೆಪಿ ಮುಂದಾಗಿದೆ.
ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಿಜೆಪಿ ರಾಜ್ಯ ಸಮಿತಿ ಶಿಫಾರಸು ಮಾಡಿದೆ. ಯತ್ನಾಳ್ ಹೇಳಿಕೆಗಳ ಬಗ್ಗೆ ಕೇಂದ್ರ ಶಿಸ್ತು ಸಮಿತಿಗೆ ಮಾಹಿತಿ ರವಾನಿಸಲಾಗಿದೆ.
ಸ್ವಪಕ್ಷದ ಶಾಸಕರ ಆಕ್ಷೇಪಾರ್ಹ ಹೇಳಿಕೆಯಿಂದ ಮುಜುಗರಕ್ಕೀಡಾಗಿರುವ ಪಕ್ಷ, ವಿವರಣೆ ಪಡೆಯಲು ಹಲವು ಬಾರಿ ಯತ್ನಾಳ್ ಸಂಪರ್ಕ ಮಾಡಿದೆ. ಆದರೆ ಯತ್ನಾಳ್ ದೂರವಾಣಿ ಕರೆಗೂ ಸಿಗುತ್ತಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ವೇಳೆ ಶಿಸ್ತು ಕ್ರಮ ಜರುಗಿಸುವ ಸಾಧ್ಯತೆ ದಟ್ಟವಾಗಿದೆ.