alex Certify BIG NEWS: ಶಾಸಕ ರೇಣುಕಾಚಾರ್ಯ ವಿರುದ್ಧ FIR ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕ ರೇಣುಕಾಚಾರ್ಯ ವಿರುದ್ಧ FIR ದಾಖಲು

ದಾವಣಗೆರೆ: ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸರ್ಕಾರಿ ನೌಕರರಿಗೆ ಕೆಲಸ ಮಾಡಲು ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರೇಣುಕಾಚಾರ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಕುಂಕುವಾ ಗ್ರಾಮ ಲೆಕ್ಕಾಧಿಕಾರಿ ಪ್ರಶಾಂತ್ ಕುಮಾರ್ ಎಂಬುವವರು ಶಾಸಕ ರೇಣುಕಾಚಾರ್ಯ ವಿರುದ್ಧ ದೂರು ದಾಖಲಿಸಿದ್ದಾರೆ.

ಕೋಗನಹಳ್ಳಿಯಲ್ಲಿ ಹಾನಿಗೊಳಗಾದ ಮನೆಗಳ ಸರ್ವೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರು ಹೇಳಿದಂತೆ ಗ್ರೇಡ್ ಹಾಕಬೇಕು ಎಂದು ತಾಕೀತು ಮಾಡಿದ್ದರು. ಅದಕ್ಕೆ ವರದಿ ಬದಲಿಸಲು ಆಗಲ್ಲ ಎಂದು ಪ್ರಶಾಂತ್ ಕುಮಾರ್ ಹೇಳಿದ್ದರು. ಇದಕ್ಕೆ ಸಾರ್ವಜನಿಕವಾಗಿ ಶಾಸಕರು ನಿಂದಿಸಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ವಿಎ ಪ್ರಶಾಂತ್ ಕುಮಾರ್ ದೂರು ನೀಡಿದ್ದು, ನ್ಯಾಮತಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...