alex Certify BIG NEWS: ಶಾಸಕ ರೇಣುಕಾಚಾರ್ಯ ಸಹೋದರನ ಮಗ ಸಾವು ಪ್ರಕರಣ; FIR ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕ ರೇಣುಕಾಚಾರ್ಯ ಸಹೋದರನ ಮಗ ಸಾವು ಪ್ರಕರಣ; FIR ದಾಖಲು

ದಾವಣಗೆರೆ: ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಸಾವು ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಇದೊಂದು ಯೋಜಿತ ಕೊಲೆ ಎಂದು ಕುಟುಬದವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಪ್ರಕರಣದ ತನಿಖೆಯನ್ನು ದಾವಣಗೆರೆ, ಹೊನ್ನಾಳಿ ಪೊಲೀಸರು ಚುರುಕುಗೊಳಿಸಿದ್ದಾರೆ. ಹೊನ್ನಾಳಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಎಫ್ ಐ ಆರ್ ನಲ್ಲಿ ಐಪಿಸಿ ಸೆಕ್ಷನ್ 302-ಕೊಲೆ, 201- ಸಾಕ್ಷ್ಯನಾಶ, ಹಾಗೂ 427-ವಾಹನ ಜಖಂ ಅಡಿ ಪ್ರಕರಣ ದಾಖಲಾಗಿದೆ.

ಚಂದ್ರಶೇಖರ್ ತಂದೆ ರಮೇಶ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ತುಂಗಾನದಿಯ ಕಾಲುವೆಯಲ್ಲಿ ಪತ್ತೆಯಾದ ಕಾರಿನ ಹಿಂಬದಿ ಸೀಟ್ ನಲ್ಲಿ ಚಂದ್ರಶೇಖರ್ ಮೃತದೇಹ ಪತ್ತೆಯಾಗಿತ್ತು. ಅಲ್ಲದೇ ಕೈಕಾಲು ಕಟ್ಟಿ ಹಾಕಿ , ಕಿವಿಗಳ ಮೇಲೆ ಹಲ್ಲೆ ಮಾಡಲಾಗಿದ್ದು, ತಲೆಗೆ ಬಲವಾಗಿ ಆಯುಧಗಳಿಂದ ಹೊಡೆಯಲಾಗಿದೆ ಎಂಬ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಇದೊಂದು ಕೊಲೆ ಪ್ರಕರಣ ಎಂದು ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...