ಬೆಂಗಳೂರು: ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿಯಿಟ್ಟ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ನೀಡಿದ್ದಾರೆ.
ಆಗಸ್ಟ್ 12ರಂದು ರಾತ್ರಿ ಶಾಸಕ ಸತೀಶ್ ರೆಡ್ಡಿ ಅವರ ಮನೆಯ ಮುಂದೆ ನಿಲ್ಲಿಸಿದ್ದ ಅವರ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿಯಿಟ್ಟು ಪರಾರಿಯಾಗಿದ್ದರು. ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಕೇಸ್ ಸಂಬಂಧ ಸಾಗರ್, ನವೀನ್, ಶ್ರೀಧರ್ ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು.
ಯೂಟ್ಯೂಬ್ ಚಾಟ್ ಶೋನಲ್ಲಿ ಬಿದ್ದು ಬಿದ್ದು ನಕ್ಕ ನಟಿ ಶಿಲ್ಪಾ ಶೆಟ್ಟಿ..!
ಇದೀಗ ಈ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿದ್ದು, ಸೂಕ್ತ ತನಿಖೆ ನಡೆಸುವಂತೆ ಸಿಸಿಬಿ ಡಿಸಿಪಿ ರವಿಕುಮಾರ್ ಅವರಿಗೆ ಕಮಲ್ ಪಂತ್ ಸೂಚಿಸಿದ್ದಾರೆ.