ಮೈಸೂರು: ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ. ಮೈಸೂರಿನ 4ನೇ ಹೆಚ್ಚುವರಿ ಜೆಎಂಎಫ್ ಸಿ ನ್ಯಾಯಾಲಯ ಸಾ.ರಾ.ಮಹೇಶ್ ಅವರಿಗೆ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.
ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲೋಕೇಶ್ ಎಂಬಾತ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದರೂ, ದೂರುದಾರ ಸಾ.ರಾ.ಮಹೇಶ್ ವಿಚಾರಣೆಗೆ ಹಾಜರಾಗದೇ ಗೈರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 27ರಂದು ನಡೆಯುವ ವಿಚಾರಣೆಗೆ ಸಾ.ರಾ.ಮಹೇಶ್ ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚಿಸಿ ಜಾಮೀನು ರಹಿತ ವಾರಂಟ್ ನ್ನು ನ್ಯಾಯಾಲಯ ಜಾರಿಗೊಳಿಸಿದೆ.
ಆದಾಯ ತೆರಿಗೆ ಇಲಾಖೆ ನೇಮಕಾತಿ: ಇನ್ಸ್‌ಪೆಕ್ಟರ್, ತೆರಿಗೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ
ಹೆಚ್.ವಿಶ್ವನಾಥ್ ಆಪ್ತ ಲೋಕೇಶ್ ವಿರುದ್ಧ ಕೊಲೆ ಬೆದರಿಕೆ ಆರೋಪ ಮಾಡಿದ್ದ ಸಾ.ರಾ.ಮಹೇಶ್, ಲಕ್ಷ್ಮಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ಇದೇ ವಿಚಾರವಾಗಿ ಇದೀಗ ಶಾಸಕರಿಗೆ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ ಎಂದು ತಿಳಿದುಬಂದಿದೆ.