ಮೈಸೂರು: ಐ ಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಕೆ.ಆರ್.ನಗರ ಜೆಡಿಎಸ್ ಶಾಸಕ ಸಾರಾ ಮಹೇಶ್ ನಡುವಿನ ಜಟಾಪಟಿ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಪರಸ್ಪರ ಆರೋಪದ ಮೂಲಕ ಪ್ರಕರಣ ದಾಖಲಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ರೋಹಿಣಿ ಸಿಂಧೂರಿ ಇದೀಗ ಶಾಸಕ ಸಾ.ರಾ.ಮಹೇಶ್ ಜೊತೆ ಸಂಧಾನಕ್ಕೆ ಮುಂದಾಗಿದ್ದಾರಾ ಎಂಬ ಪ್ರಶ್ನೆ ಮೂಡಿದೆ.
ಹಿರಿಯ ಐ ಎ ಎಸ್ ಅಧಿಕಾರಿ ಮಣಿವಣ್ಣನ್ ಮಧ್ಯಸ್ಥಿಕೆಯಲ್ಲಿ ಸಂಧಾನ ಮಾತುಕತೆ ನಡೆದಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಸಾ.ರಾ.ಮಹೇಶ್, ಮಣಿವಣ್ಣನ್ ಹಾಗೂ ರೋಹಿಣಿ ಸಿಂಧೂರಿ ಮಾತುಕತೆ ನಡೆಸುತ್ತಿರುವ ಫೋಟೊ ವೈರಲ್ ಆಗಿದೆ.
ಅಲ್ಲದೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಾನೂನು ಸಚಿವ ಮಾಧುಸ್ವಾಮಿ ಸೇರಿದಂತೆ ಹಲವು ರಾಜಕೀಯ ಮುಖಂಡರು ಕೂಡ ಶಾಸಕ ಸಾ.ರಾ. ಮಹೇಶ್ ಹಾಗೂ ರೋಹಿಣಿ ಸಿಂಧೂರಿ ಸಂಧಾನ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಒಟ್ಟಾರೆ ಚುನಾವಣೆ ಸಂದರ್ಭದಲ್ಲಿ ಶಾಸಕ ಸಾ.ರಾ.ಮಹೇಶ್ ಹಾಗೂ ಐ ಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಂಧಾನ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.