ಮಂಡ್ಯ: ಮಳವಳ್ಳಿಯಲ್ಲಿ ನಡೆದ ಘಟನೆ ಮಾಸುವ ಮುನ್ನವೇ ಅಂಥದ್ದೇ ಮತ್ತೊಂದು ಘಟನೆ ಮಂಡ್ಯದಲ್ಲಿ ಬೆಳಕಿಗೆ ಬಂದಿದ್ದು, ಶಿಕ್ಷಕನೊಬ್ಬ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಮಂಡ್ಯ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕನ ವಿರುದ್ಧ ಕೇಳಿಬಂದಿದೆ.
ಕಾಮುಕ ಶಿಕ್ಷಕನ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿಯರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ದೂರು ನೀಡಿದ್ದಾರೆ.
ವಿದ್ಯಾರ್ಥಿನಿಯರ ದೂರು ಹಿನ್ನೆಲೆಯಲ್ಲಿ ಎಸ್ ಡಿ ಎಂ ಸಿ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಶಿಕ್ಷಕನ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕನ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಸಭೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಸೌಭಾಗ್ಯ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆರೋಪಿ ಶಿಕ್ಷಕನನ್ನು ಅಮಾನತುಗೊಳಿಸುವಂತೆ ಪೋಷಕರು ಪಟ್ಟು ಹಿಡಿದಿದ್ದಾರೆ.