ಶಾಲೆಗಳಿಗೆ ಶಿಕ್ಷಕರು ಅನಧಿಕೃತವಾಗಿ ಗೈರು ಹಾಜರಾಗುತ್ತಿರುವ ಕುರಿತು ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನವೊಂದನ್ನು ಕೈಗೊಳ್ಳಲು ಮುಂದಾಗಿದೆ.
ಹಾಜರಾತಿಯನ್ನು ಬಯೋಮೆಟ್ರಿಕ್ ಮಾಡಲು ಚಿಂತನೆ ನಡೆಸಲಾಗಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕಲಬುರ್ಗಿಯಲ್ಲಿ ಈ ವಿಷಯವನ್ನು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಕ್ಯೂಆರ್ ಕೋಡ್ ಬಳಸಿ ಸಹಿ ಹಾಕುವ ವ್ಯವಸ್ಥೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಸಹ ಚಿಂತನೆ ನಡೆಸಲಾಗಿದ್ದು, ಈ ಕುರಿತು ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.